*ಜವಾಹರ್ ನವೋದಯ ವಿದ್ಯಾಲಯ ಪ್ರವೇಶಕ್ಕೆ ಅರ್ಜಿ ಹಾಕುವಂತೆ ಬಿಇಓ ಮರಿಗೌಡ ಮನವಿ*

 

ಚನ್ನಪಟ್ಟಣ :ಕನಕಪುರ ತಾಲೂಕಿನ ಶಿವನಹಳ್ಳಿ ಬಳಿ ಇರುವ ಜವಾಹರ್ ನವೋದಯ ವಿದ್ಯಾಲಯದಲ್ಲಿ 2024-25ನೇ ಸಾಲಿಗೆ 6ನೇ ತರಗತಿ ಪ್ರವೇಶಕ್ಕೆ, ನವೋದಯ ವಿದ್ಯಾಲಯ ಸಮಿತಿ ವತಿಯಿಂದ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ತಾಲೂಕಿನ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಶಾಲೆಗಳ ಮುಖ್ಯ ಶಿಕ್ಷಕರು ತಮ್ಮ ಶಾಲೆಯಲ್ಲಿ 5ನೇ ತರಗತಿಯನ್ನು ಓದುತ್ತಿರುವ ವಿದ್ಯಾರ್ಥಿಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿ ಹಾಕಿಸಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎನ್ ಮರೀಗೌಡ ತಿಳಿಸಿದ್ದಾರೆ.

ಅರ್ಜಿ ಪ್ರಕ್ರಿಯೆ ದಿನಾಂಕ 20-06-2023 ರಿಂದ ಆರಂಭವಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಆಗಸ್ಟ್ 10, 2023 ಕೊನೆಯ ದಿನವಾಗಿದೆ. ನವೋದಯ ವಿದ್ಯಾಲಯಕ್ಕೆ ಅರ್ಜಿ ಸಲ್ಲಿಸುವವರು ಜಿಲ್ಲೆಯ ನಿವಾಸಿಗಳಾಗಿರಬೇಕು. ಅರ್ಜಿದಾರರು 2023-24ರಲ್ಲಿ ಸರ್ಕಾರಿ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಶಾಲೆಯಲ್ಲಿ 5ನೇ ತರಗತಿಯಲ್ಲಿ ಓದುತ್ತಿರಬೇಕು. ಅದೇ ಶಾಲೆಗಳಲ್ಲಿ 3 ಮತ್ತು 4ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು, ಮೇ 1,2012 ರಿಂದ ಏಪ್ರಿಲ್ 30, 2014ರ ನಡುವೆ ಜನಿಸಿರಬೇಕು. ಈ ಅರ್ಹತೆಗಳನ್ನು ಹೊಂದಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದ್ದಾರೆ .

 

ಜವಾಹರ್ ನವೋದಯ ವಿದ್ಯಾಲಯ ಆಯ್ಕೆ ಪರೀಕ್ಷೆಯ ಪ್ರಮಾಣ ಪತ್ರವನ್ನು 5ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಭರ್ತಿ ಮಾಡಿ ವಿದ್ಯಾರ್ಥಿಯ ಭಾವಚಿತ್ರ ಮತ್ತು ಸಹಿ ಪಾಲಕರ ಸಹಿ ಮತ್ತು ಮುಖ್ಯೋಪಾಧ್ಯಾಯರ ಸಹಿ, ರಾಮನಗರ ಜಿಲ್ಲೆಗೆ ಸಂಬಂಧಿಸಿದ ಆಧಾರ್ ಕಾರ್ಡ್ ಅಥವಾ ವಾಸಸ್ಥಳ ದೃಢೀಕರಣ ಪತ್ರದೊಂದಿಗೆ ಅಪ್ಲೋಡ್ ಮಾಡಬೇಕು,ಉಚಿತವಾಗಿ ಅರ್ಜಿಯನ್ನು ಸಲ್ಲಿಸಲು 5ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಪ್ರಮಾಣ ಪತ್ರವನ್ನು ಭರ್ತಿ ಮಾಡಿ ವಿದ್ಯಾರ್ಥಿಯ ಭಾವಚಿತ್ರ ಮತ್ತು ಸಹಿ, ಪಾಲಕರ ಸಹಿ ರಾಮನಗರ ಜಿಲ್ಲೆಗೆ ಸಂಬಂಧಿಸಿದ ಆಧಾರ್ ಕಾರ್ಡ್ ಅಥವಾ ವಾಸಸ್ಥಳ ದೃಡೀಕರಣ ಪತ್ರದೊಂದಿಗೆ ಜವಾಹರ್ ನವೋದಯ ವಿದ್ಯಾಲಯ ಶಿವನಹಳ್ಳಿ ಬಟ್ಟಲು ಗುಂಡಪ್ಪ ದೇವಸ್ಥಾನದ ಹತ್ತಿರ ಕನಕಪುರ ತಾಲೂಕು ಇಲ್ಲಿಗೆ ನೇರವಾಗಿ ಭೇಟಿ ನೀಡಿಯೂ ಕೂಡ ಅರ್ಜಿ ಸಲ್ಲಿಸಬಹುದು ಎಂದಿದ್ದಾರೆ.

ಈ ಶಾಲೆಯಲ್ಲಿ ಉಚಿತ ವಸತಿ ಶಿಕ್ಷಣ, ಬಾಲಕ ಬಾಲಕಿಯರಿಗೆ ಪ್ರತ್ಯೇಕ ವಿದ್ಯಾರ್ಥಿ ನಿಲಯಗಳು, ಎನ್. ಸಿ. ಸಿ, ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಕ್ರೀಡೆಗಳಿಗೆ ಉತ್ತೇಜನವಿರುವುದರಿಂದ, ಪ್ರಯೋಗಾಲಯಗಳು, ಕಂಪ್ಯೂಟರ್ ಲ್ಯಾಬ್, ಗ್ರಂಥಾಲಯ ಮತ್ತು ಸ್ಮಾರ್ಟ್ ತರಗತಿಗಳ ಸೌಲಭ್ಯವಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಈ ಶಾಲೆಗೆ ದಾಖಲಾಗಲು ಅರ್ಜಿ ಸಲ್ಲಿಸಬೇಕೆಂದು ಮನವಿ ಮಾಡಿದ್ದಾರೆ .

Share & Spread
error: Content is protected !!