ಮಹತ್ವದ ಬೆಳವಣಿಗೆಯಲ್ಲಿ ಭಾರತೀಯ ದಂಡ ಸಂಹಿತೆ (ಐಪಿಸಿ) 1860, ಅಪರಾಧ ದಂಡ ಪ್ರಕ್ರಿಯಾ ಸಂಹಿತೆ (ಸಿಆರ್‌ಪಿಸಿ) 1973 ಮತ್ತು ಭಾರತೀಯ ಸಾಕ್ಷ್ಯ ಕಾಯಿದೆ 1872 ಅನ್ನು ಬದಲಾವಣೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಭಾರತೀಯ ನ್ಯಾಯ ಸಂಹಿತೆ 2023 ಮಸೂದೆ ಮಂಡನೆ ಮಾಡಿದೆ. ಗೃಹ ಸಚಿವ ಅಮಿತ್ ಶಾ ಅವರು ಲೋಕಸಭೆಯಲ್ಲಿ ಮಸೂದೆಯನ್ನು ಮಂಡಿಸಿದರು.
ಪ್ರಸ್ತಾವಿತ ಕಾನೂನಿನ ಸೆಕ್ಷನ್ 101 (ಬಿ) ಪ್ರಕಾರ, ಗುಂಪು ಹತ್ಯೆಗೈದ ಗುಂಪಿನಲ್ಲಿರುವ ಪ್ರತಿಯೊಬ್ಬ ವ್ಯಕ್ತಿಗೂ ಮರಣದಂಡನೆ, ಜೀವಾವಧಿ ಶಿಕ್ಷೆ ಅಥವಾ ಏಳು ವರ್ಷ ಇಲ್ಲವೇ ಅದಕ್ಕಿಂತ ಹೆಚ್ಚಿನ ಜೈಲು ಶಿಕ್ಷೆ ವಿಧಿಸಲಾಗುತ್ತದೆ.
ಭಾರತೀಯ ದಂಡ ಸಂಹಿತೆ (ಐಪಿಸಿ) ಬದಲಿಗೆ ಭಾರತೀಯ ನ್ಯಾಯ ಸಂಹಿತೆಯನ್ನು ಸಂಸತ್ತು ಅಂಗೀಕರಿಸಿದರೆ ಗುಂಪು ಹತ್ಯೆಗೈದವರಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗುತ್ತದೆ.