ಸಂವಿಧಾನ ಜಾಗೃತಿ ಜಾಥಗೆ ಚಾಲನೆ

ದೇಶದ ಸಂವಿಧಾನದ ಪ್ರಾಮುಖ್ಯತೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಸಿದ್ದಪಡಿಸಲಾಗಿರುವ ಸಂವಿಧಾನ ಜಾಗೃತಿ ಜಾಥ ಸ್ಥಬ್ತ ಚಿತ್ರ ಸಂಚಾರಕ್ಕೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜ.26ರ ಶುಕ್ರವಾರ ಸಾರಿಗೆ, ಮುಜರಾಯಿ ಸಚಿವರು ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ಚಾಲನೆ ನೀಡಿದರು

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ನಿರ್ಮಿಸಲಾಗಿರುವ ಈ ಸ್ಥಬ್ತ ಚಿತ್ರ ಜ.26 ರಿಂದ ಫೆ.23 ರವರೆಗೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್‌ಗಳಲ್ಲಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಂಚರಿಸಲಿದೆ.

ಈ ಸಂದರ್ಭದಲ್ಲಿ ರಾಮನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಇಕ್ಬಾಲ್ ಹುಸೇನ್, ನಗರಸಭೆ ಅಧ್ಯಕ್ಷರಾದ ವಿಜಯಕುಮಾರಿ, ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿಗ್ವಿಜಯ್ ಬೋಡ್ಕೆ, ಅಪರ ಜಿಲ್ಲಾಧಿಕಾರಿ ಶಿವಾನಂದ ಮೂರ್ತಿ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

 

Share & Spread
error: Content is protected !!