ರಾಮನಗರ : ಕೂಸಿನ ಮನೆ ಪ್ರಗತಿ ಪರಿಶೀಲನಾ ಸಭೆ

ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು (ಪಂ.ರಾಜ್) ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅವರ ಅಧ್ಯಕ್ಷತೆಯಲ್ಲಿ ಇತ್ತೀಚಿಗೆ ಕೂಸಿನ ಮನೆ ಪ್ರಗತಿ ಪರಿಶೀಲನಾ ಸಭೆಯು ವಿಡಿಯೋ ಸಂವಾದದ ಮೂಲಕ ನಡೆಯಿತು. ರಾಮನಗರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು ದಿಗ್ವಿಜಯ್ ಬೋಡ್ಕೆ ಅವರು ಈ ಸಂವಾದದಲ್ಲಿ ಭಾಗಿಯಾಗಿದ್ದರು.

ಈ ವೇಳೆ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಚಿಕ್ಕಸುಬ್ಬಯ್ಯ, ಯೋಜನಾ ನಿರ್ದೇಶಕರಾದ ಮಂಜುನಾಥಸ್ವಾಮಿ, ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿಗಳು, ತಾಲ್ಲೂಕು ಕಾರ್ಯ ನಿರ್ವಾಹಕ ಅಧಿಕಾರಿಗಳು, ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕರು ಹಾಗೂ ನರೇಗಾ ಶಾಖೆ ಸಿಬ್ಬಂದಿಗಳು ಹಾಜರಿದ್ದರು

Share & Spread
error: Content is protected !!