ಚನ್ನಪಟ್ಟಣ: ರಾಜ್ಯದಲ್ಲಿನ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ಕೇಂದ್ರ ಸರ್ಕಾರವು ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಚನ್ನಪಟ್ಟಣ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರಾದ ನಿಂಗೇಗೌಡ(ಎನ್‌ಜಿ) ಅವರು ಅಸಮಾಧಾನ ವ್ಯಕ್ತಪಡಿಸಿದರು. ಕಾವೇರಿ ನದಿ ನೀರಿನ ಹಂಚಿಕೆಯಲ್ಲಿ ಸಂಕಷ್ಟ ಸೂತ್ರ ರಚಿಸುವ ಜೊತೆಗೆ ಮೇಕೆದಾಟು ಯೋಜನೆಗೆ ಅಡಿಗಲ್ಲು ಹಾಕುವಂತೆ ಆಗ್ರಹಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ
ರಾಜ್ಯಾಧ್ಯಕ್ಷರಾದ ರಮೇಶ್‌ಗೌಡರ ನೇತೃತ್ವದಲ್ಲಿ ನಿರಂತರವಾಗಿ ಹೋರಾಟ ಮಾಡುತ್ತಿದ್ದು ಶನಿವಾರ ನಡೆದ 115 ನೇ ದಿನದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಅವರು ದೇಶದ ಯಾವುದೇ
ರಾಜ್ಯದಲ್ಲಿ ಯಾವುದೇ ಪಕ್ಷ ಅಧಿಕಾರದಲ್ಲಿದ್ದರೂ ಆ ರಾಜ್ಯದ ಸಮಸ್ಯೆಗಳಿಗೆ ಸ್ಪಂಧಿಸುವ ಜವಾಬ್ದಾರಿಯುತ ಸ್ಥಾನದಲ್ಲಿರುವ ಕೇಂದ್ರ ಸರ್ಕಾರವು ರಾಜ್ಯದಲ್ಲಿನ ಕಾವೇರಿ ನದಿ ನೀರು ಹಂಚಿಕೆ ಹಾಗೂ
ಮೇಕೆದಾಟು ಅನುಷ್ಠಾನದ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸಿ ಸಮಸ್ಯೆ ಪರಿಹರಿಸದೆ ಮಲತಾಯಿ ಧೋರಣೆ ಮಾಡುತ್ತಿವುದು ಖಂಡನೀಯವಾಗಿದ್ದು, ರಾಜ್ಯದಲ್ಲಿ ನೀರಿನ ಲಭ್ಯತೆ ಬಗ್ಗೆ ಅವಲೋಕನ
ಮಾಡಿ ರಾಜ್ಯದಲ್ಲಿ ನೀರಿನ ಹಂಚಿಕೆಗೆ ಸಂಕಷ್ಟ ಸೂತ್ರ ರಚಿಸಲು ಕೆಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಿದರೆ ಈ ಸಮಸ್ಯೆಗಳಿಗೆ ಮುಕ್ತಿ ಸಿಗುತ್ತದೆ ಎಂದು ಅಭಿಪ್ರಾಯಿಸಿದರು. ಮೇಕೆದಾಟು ಅಣೆಕಟ್ಟೆ ನಿರ್ಮಾಣದ ಯೋಜನೆಯಿಂದ ಮಳೆ ಬಂದಾಗ ಸಮುದ್ರದ ಪಾಲಾಗುವ 67 ಟಿಎಂಸಿ ನೀರನ್ನು ಸಂಘ್ರಗ ಮಾಡಿಕೊAಡು ಆರೇಳು ಜಿಲ್ಲೆಗಳಿಗೆ ಬರದಲ್ಲೂ ನೀರನ್ನು ಉಪಯೋಗಿಸಿಕೊಳ್ಳುವ ಅವಕಾಶ ಇದೆ. ಈ ಯೋಜನೆಯನ್ನು ಸರ್ಕಾರ ಅನುಷ್ಠಾನಕ್ಕೆ ತರಲು ಕೇಂದ್ರದ ಅನುಮತಿ ನೀಡುವಂತೆ ಒತ್ತಾಯ ಮಾಡುತ್ತಿರುವ ರಮೇಶ್‌ಗೌಡರ ಕಾರ್ಯಕ್ಕೆ ಅವರ ಸ್ವಾರ್ಥವಲ್ಲ. ಅವರು ನೂರಾರು ಎಕದರೆ ಜಮೀನಿಗೆ ನೀರು ಬೇಕೆಂದು ಈ ಹೋರಾಟ ಮಾಡುತ್ತಿಲ್ಲ. ಪ್ರತಿಯೊಬ್ಬರಿಗೂ ಕುಡಿಯುವ ನೀರು ಸಿಗಬೇಕು ಮುಂದೆ ನೀರಿಗಾಗಿ ಹೋರಾಟ ಮಾಡುವ ಪರಿಸ್ಥಿತಿ ನಿರ್ಮಾಣ ಆಗಬಾರದು ಎಂಬ ನಿಟ್ಟಿನಲ್ಲಿ ಈ ಹೋರಾಟ ಮಾಡುತ್ತಿದ್ದು, ಯಾವುದೇ ಪಕ್ಷದ ವಿರುದ್ಧ ಈ ಹೋರಾಟವಲ್ಲದ ಕಾರಣ ರಸ್ತೆಯಲ್ಲಿ ಓಡಾಡುವ ಪ್ರತಿಯೊಬ್ಬರೂ ಈ ಹೋರಾಟಕ್ಕೆ ಬೆಂಬಲ ನೀಡಿ ಹೋರಾಟಕ್ಕೆ ಶಕ್ತಿ ತುಂಬಿದರೆ ಅದರ ಬಿಸಿ ರಾಜ್ಯ
ಮತ್ತು ಕೇಂದ್ರ ಸರ್ಕಾರಕ್ಕೆ ಮುಟ್ಟುತ್ತದೆ ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಹೋರಾಟಕ್ಕೆ ಬೆಂಬಲ ನೀಡಬೇಕು ಎಂದು ನಿAಗೇಗೌಡರು ಆಗ್ರಹಿಸಿದರು. ಕಕಜವೇದಿಕೆಯ ರಾಜ್ಯಾಧ್ಯಕ್ಷ ರಮೇಶ್‌ಗೌಡರು ಮಾತನಾಡಿ ಕಾವೇರಿ ನದಿ ನೀರು ಹಂಚಿಕೆಯಲ್ಲಿ ಸಂಕಷ್ಟ ಸೂತ್ರ ರಚಿಸುವಂತೆ ಹಾಗೂ ಮೇಕೆದಾಟು ಯೋಜನೆಗೆ ಅಡಿಗಲ್ಲು ಹಾಕುವಂತೆ ಆಗ್ರಹಿಸಿ ವೇದಿಕೆಯ ಹೋರಾಟಕ್ಕೆ 115 ದಿನಗಳು ತುಂಬಿದ್ದು ಈ ಹೋರಾಟ ನಿರಂತರವಾಗಿ ನಡೆಯಲಿದೆ. ಸಾವಿರ ದಿನವಾದರೂ ಈ ಹೋರಾಟ ನಿಲ್ಲುವುದಿಲ್ಲ ಎಂದು ಅಭಿಪ್ರಾಯಿಸಿದರು.
ಪ್ರತಿಭಟನೆಯಲ್ಲಿ ವೇದಿಕೆ ರಾಜ್ಯ ಉಪಾಧ್ಯಕ್ಷ ರಂಜಿತ್‌ಗೌಡ, ಶಿವಣ್ಣ, ರವಿ, ಜಯರಾಮು, ಜಗದಾಪುರ ಕೃಷ್ಣೆಗೌಡ, ರ‍್ಯೋಂಬೋ ಸೂರಿ, ಪುಟ್ಟಪ್ಪಾಜಿ, ತಾಲೂಕು ಗೌರವಾಧ್ಯಕ್ಷ ಚಿಕ್ಕಣ್ಣಪ್ಪ, ಆಟೋ ನಾಗಲಿಂಗು, ಸಯ್ಯದ್ ಮುಜಾಹಿದ್, ಮೆಣಸಿಗನಹಳ್ಳಿ ರಾಮಕೃಷ್ಣಪ್ಪ, ರಂಗಭೂಮಿ ಕಲಾವಿರಾದ ಎಂಟಿಆರ್ ತಿಮ್ಮರಾಜು ಇತರರು ಇದ್ದರು.