ರಾಮನಗರ, ಜ. 30
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ರಾಮನಗರ ಜಿಲ್ಲೆಯಲ್ಲಿ 2024 ನೇ ಸಾಲಿನಲ್ಲಿ ಎಫ್‌ಎಕ್ಯೂ ಗುಣಮಟ್ಟದ ಉಂಡೆಕೊಬ್ಬರಿಯನ್ನು ಪ್ರತಿ ಕ್ವಿಂಟಾಲ್‌ಗೆ 12 ಸಾವಿರ ರೂ.ಗಳಂತೆ ಇದೇ ಫೆ. 1 ರಿಂದ ಖರೀದಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಅವರು ತಿಳಿಸಿದ್ದಾರೆ.
ನೋಂದಣಿ ಮತ್ತು ಖರೀದಿ ಕೇಂದ್ರಗಳ ವಿವರ: ರಾಮನಗರ ತಾಲ್ಲೂಕಿನ ಎಪಿಎಂಸಿ ಆವರಣ ಹಾಗೂ ಚನ್ನಪಟ್ಟಣ ತಾಲ್ಲೂಕಿನ ಎಪಿಎಂಸಿ ಆವರಣ ಹಾಗೂ ಕನಕಪುರ ತಾಲ್ಲೂಕಿನ ಎಪಿಎಂಸಿ ಆವರಣದಲ್ಲಿ ನೋಂದಣಿ ಮತ್ತು ಖರೀದಿ ಕೇಂದ್ರಗಳನ್ನು ತೆರೆಯಲಾಗುವುದು.
ಉಂಡೆಕೊಬ್ಬರಿ ನೋಂದಣಿ/ಖರೀದಿ ಪ್ರಕ್ರಿಯೆಯಲ್ಲಿ ಎನ್.ಐ.ಸಿ ರವರು ಸಿದ್ದಪಡಿಸಿರುವ ಫ್ರೂಟ್ಸ್ ದತ್ತಾಂಶದಲ್ಲಿನ ಬೆಳೆ ಸಮೀಕ್ಷೆ ಪ್ರಕಾರ ನೊಂದಣಿ ಪ್ರಕ್ರಿಯೆ ಕೈಗೊಳ್ಳಲು ರೈತರು ಆಧಾರ್ ಕಾರ್ಡ್ನೊಂದಿಗೆ ಖುದ್ದಾಗಿ ಬಂದು ಬಯೋಮೆಟ್ರಿಕ್ ಆಧಾರಿತ ವಿಧಾನದಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕು.
ಸರ್ಕಾರದ ಆದೇಶದಂತೆ ರೈತರಿಗೆ ಪ್ರತಿ ಎಕರೆಗೆ 6 ಕ್ವಿಂಟಾಲ್ ಮತ್ತು ಗರಿಷ್ಠ 20 ಕ್ವಿಂಟಾಲ್ ಎಫ್.ಎ.ಕ್ಯೂ ಗುಣಮಟ್ಟದ ಖರೀದಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.