ಕುಷ್ಠರೋಗ ಮುಕ್ತ ಸಮಾಜ ನಿರ್ಮಾಣಕ್ಕೆ ಕರೆ : ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ. ಮಂಜುನಾಥ್

ರಾಮನಗರ, ಜ. 30

ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನದಡಿಯಲ್ಲಿ ಜನವರಿ-30 ರಿಂದ ಫೆಬ್ರವರಿ-13ರ ವರೆಗೆ ಜಿಲ್ಲೆಯಾದ್ಯಂತ ಅರಿವು ಮೂಡಿಸಲಾಗುತ್ತದೆ. ಕುಷ್ಠರೋಗವು ಮೈಕೋಬ್ಯಾಕ್ಟೀರಿಯಂಲೆಪ್ರೆ ಎಂಬ ರೋಗಾಣುವಿನಿಂದ ಬರುತ್ತದೆ. ದೇಹದ ಮೇಲೆ ಯಾವುದೇ ಸ್ಪರ್ಶ ಜ್ಞಾನವಿಲ್ಲದ ತಿಳಿ-ಬಿಳಿ ಅಥವಾ ತಾಮ್ರ ಬಣ್ಣ ಮಚ್ಚೆಗಲು ಕಾಣಿಸುವುದು, ಕೈ ಕಾಲುಗಳಲ್ಲಿ ಜೋಮು ಹಿಡಿದು ಸ್ಪರ್ಶ ಜ್ಞಾನವಿಲ್ಲದಿರುವುದು, ಮುಖ ಅಥವಾ ಕೈಕಾಲುಗಳಲ್ಲಿ ಎಣ್ಣೆ ಸವರಿದಂತೆ ಹೊಳಪು ಇರುವುದು ರೋಗದ ಲಕ್ಷಣವಾಗಿದ್ದು, ಲಕ್ಷಣಗಳು ಕಂಡುಬAದಲ್ಲಿ ಹತ್ತಿರದ ಸರ್ಕಾರಿ ಆಸ್ಪತ್ರೆಯಲ್ಲಿ ಪರೀಕ್ಷಿಸಿಕೊಳ್ಳಿ ರೋಗವನ್ನು ಬಹುಔಷಧಿ ಚಿಕಿತ್ಸೆಯಿಂದ ಸಂಪೂರ್ಣವಾಗಿ ಗುಣ ಪಡಿಸಬಹುದು ಎಂದು ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ. ಮಂಜುನಾಥ್ ಅವರು ತಿಳಿಸಿದರು.

ಅವರು ಡಿ. 30ರ ಮಂಗಳವಾರ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕುಷ್ಟರೋಗ ನಿರ್ಮೂಲನಾಧಿಕಾರಿಗಳ ಕಚೇರಿ ವತಿಯಿಂದ ಆಯೋಜಿಸಲಾಗಿದ್ದ ಸ್ಪರ್ಶ್ ಕುಷ್ಠ ರೋಗ ಅರಿವು ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಸಮುದಾಯದಲ್ಲಿ ಕುಷ್ಠರೋಗದ ಬಗ್ಗೆ ಇರುವ ಕಳಂಕವನ್ನು ಕೊನೆಗೊಳಿಸಿ-ಘನತೆಯನ್ನು ಎತ್ತಿಹಿಡಿಯುವ ಮೂಲಕ ಕುಷ್ಠರೋಗ ಮುಕ್ತ ಸಮಾಜ ನಿರ್ಮಿಸಲು ಸಹಕರಿಸುವಂತೆ ತಿಳಿಸಿದರು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಎಸ್. ಗಂಗಾಧರ್ ಅವರು ಮಾತನಾಡಿ, ರಾಷ್ಟçಪಿತ ಮಹಾತ್ಮ ಗಾಂಧೀಜಿಯವರು ಹುತಾತ್ಮ ದಿನವಾದ ಇಂದು ಕುಷ್ಠರೋಗಿಗಳನ್ನು ಪ್ರೀತಿ ವಿಶ್ವಾಸದಿಂದ ನೋಡಿಕೊಂಡು ಅವರ ಆತ್ಮ ಗೌರವಕ್ಕೆ ದಕ್ಕೆಬಾರದಂತೆ ನೋಡಿಕೊಳ್ಳಬೇಕು ಕುಷ್ಠರೋಗಕ್ಕೆ ಅಂಟಿರುವ ಕಳಂಕ ತಾರತಮ್ಯ ಹೋಗಲಾಡಿಸಲು ಬದ್ಧರಾಗಿ ಸಮಾಜದ ಮುಖ್ಯವಾಹಿನಿಯಲ್ಲಿ ಗೌರವಯುತವಾಗಿ ಬದುಕಲು ಅವಕಾಶ ಕಲ್ಪಿಸಬೇಕು. ಮಹತ್ಮ ಗಾಂಧೀಜಿಯವರ ಕನಸಾದ ಕುಷ್ಠರೋಗ ಮುಕ್ತ ಭಾರತ ಕಟ್ಟಲು ಕಾಯ, ವಾಚ, ಮನಸ, ಶ್ರಮಿಸಬೇಕೆಂದು ಪ್ರತಿಜ್ಞಾವಿಧಿ ಬೋಧಿಸಿದರು.

ಜಾಗೃತಿ ಜಾಥಾ ರಾಮನಗರ ಟೌನ್ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಘೋಷಣೆ ಮತ್ತು ಕರಪತ್ರ ವಿತರಣೆ ಮೂಲಕ ಅರಿವು ಮೂಡಿಸಿ ನಂತರ ವಾಟರ್ ಟ್ಯಾಂಕ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ. ರಾಜು, ಮನೋವೈದ್ಯ ಡಾ. ಆದರ್ಶ್, ಆರೋಗ್ಯ ಮೇಲ್ವಿಚಾರಣಾಧಿಕಾರಿ ವಿನಯ್ ಕುಮಾರ್, ಮೇಲ್ವಿಚಾರಕರಾದ ರಾಜು, ಅನುರೂಪ್, ಮನೋವೈದ್ಯಕೀಯ ಕಾರ್ಯಕರ್ತೆ ಪದ್ಮರೇಖಾ, ಆರೋಗ್ಯ ಸಿಬ್ಬಂದಿ, ಪೊಲೀಸ್ ಅಧಿಕಾರಿಗಳು, ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು ಹಾಗೂ ಸಾರ್ವಜನಿಕರು ಹಾಜರಿದ್ದರು.

Share & Spread
error: Content is protected !!