ರಾಮನಗರ, ಫೆ. 02
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2023-24ನೇ ಜನವರಿ ಆವೃತ್ತಿಯ ಯುಜಿಸಿ ಅನುಮೋದಿತ ಹಾಗೂ ನ್ಯಾಕ್ ಎ+ ಮಾನ್ಯತೆಯೊಂದಿಗೆ ವಿವಿಧ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಸ್ನಾತಕ/ಸ್ನಾತಕೋತ್ತರ ಪದವಿಗಳಾದ ಬಿ.ಎ., ಬಿ.ಕಾಂ., (ಮೂರು ವರ್ಷ/ವಾರ್ಷಿಕ ಪರೀಕ್ಷೆ) ಬಿ.ಲಿಬ್.ಐ.ಎಸ್ಸಿ., ಬಿ.ಎಸ್ಸಿ., ಬಿ.ಸಿ.ಎ., ಬಿ.ಬಿ.ಎ., ಬಿ.ಎಸ್.ಡಬ್ಲ್ಯೂ., ಎಂ.ಎ., ಎಂ.ಕಾಂ., ಎಂ.ಬಿ.ಎ., ಎಂ.ಎಸ್.ಡಬ್ಲೂö್ಯ., ಎಂ.ಸಿ.ಎ., ಎಂ.ಲಿಬ್.ಐ.ಎಸ್.ಸಿ., ಎಂ.ಎಸ್ಸಿ., ಪಿ.ಜಿ. ಡಿಪ್ಲೊಮಾ, ಡಿಪ್ಲೊಮಾ ಮತ್ತು ಸರ್ಟಿಫಿಕೇಟ್ ಕೋರ್ಸ್ಗಳಿಗೆ ಪ್ರವೇಶಾತಿಯು ಜ. 9 ರಿಂದ ಪ್ರಾರಂಭವಾಗಿದೆ.
ಪ್ರವೇಶಾತಿ ಬಯಸುವ ವಿದ್ಯಾರ್ಥಿಗಳು ಕರಾಮುವಿಯ ಅಧಿಕೃತ ವೆಬ್‌ಸೈಟ್ www.ksoumysuru.ac.in ಮುಖಾಂತರ ಪ್ರವೇಶಾತಿ ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಕರಾಮುವಿ ಪ್ರಾದೇಶಿಕ ಕೇಂದ್ರ ಶಾಂತಿನಿಕೇತನ ಸಮೂಹ ಶಿಕ್ಷಣ ಸಂಸ್ಥೆ ರಾಮನಗರ, ಇಲ್ಲಿ ಸಲ್ಲಿಸಿ ಪ್ರವೇಶಾತಿ ಪಡೆಯಬಹುದಾಗಿರುತ್ತದೆ.
ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಎಲ್ಲಾ ಭಾನುವಾರಗಳಂದು, ಎರಡನೇ ಮತ್ತು ನಾಲ್ಕನೇ ಶನಿವಾರಗಳಂದು ರಾಮನಗರ ಪ್ರಾದೇಶಿಕ ಕೇಂದ್ರ ಕಚೇರಿಯು ಎಂದಿನAತೆ ಕಾರ್ಯನಿರ್ವಹಿಸುತ್ತಿದ್ದು, ಇದರ ಸದುಪಯೋಗವನ್ನು ಹೆಚ್ಚಿನ ವಿದ್ಯಾರ್ಥಿಗಳು ಪಡೆಯಹುದಾಗಿದೆ.
ಹೆಚ್ಚಿನ ವಿವರಗಳಿಗಾಗಿ ಮೊ.ಸಂ: 9964495936, 8861732487, 9743184848 9900356226 ಹಾಗೂ 8618501602 ಅನ್ನು ಸಂಪರ್ಕಿಸುವAತೆ ಪ್ರಾದೇಶಿಕ ನಿರ್ದೇಶಕಿ ಡಾ. ಕೆ. ನಂದಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.