ರಾಮನಗರ, ಫೆ. 12 ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ (ಎಂ.ಎಸ್.ಪಿ) ರೈತರಿಂದ ರಾಗಿ ಹಾಗೂ ಭತ್ತ ಖರೀದಿಸಲು ಈಗಾಗಲೇ ರೈತರಿಂದ ನೋಂದಣಿಯನ್ನು ಪ್ರಾರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಅವರು ತಿಳಿಸಿದರು.
ಅವರು ಫೆ. 12ರ ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರೈತರು ರಾಗಿ ಹಾಗೂ ಭತ್ತವನ್ನು ಮಧ್ಯವರ್ತಿಗಳಿಗೆ ಮಾರಾಟ ಮಾಡದೇ ನೇರವಾಗಿ ಸರ್ಕಾರ ಗುರುತುಪಡಿಸಿರುವ ಕೇಂದ್ರಗಳಲ್ಲಿ ಮಾರಾಟ ಮಾಡಬೇಕು ಹಾಗೂ ರೈತರಿಂದ ರಾಗಿ ಹಾಗೂ ಭತ್ತ ಖರೀದಿಸಲು 4 ತಾಲ್ಲೂಕುಗಳಲ್ಲಿ ಈಗಾಗಲೇ ಖರೀದಿ ಕೇಂದ್ರ ತೆರೆಯಲಾಗಿದೆ. ಖರೀದಿಗೆ ಅನುಕೂಲವಾಗುವಂತೆ ರೈತ ಸಂಪರ್ಕ ಕೇಂದ್ರಗಳನ್ನು ತೆರೆಯಲಾಗಿದೆ. ರೈತ ಸಂಪರ್ಕ ಕೇಂದ್ರಗಳಲ್ಲಿ ಆರ್.ಟಿ.ಸಿ ಹಾಗೂ ಬೆಳೆಯ ಮಾಹಿತಿಯೊಂದಿಗೆ ರೈತರು ನೋಂದಾಯಿಸಿಕೊಳ್ಳುವoತೆ ಹಾಗೂ ಆರ್.ಟಿ.ಸಿಯಲ್ಲಿ ರಾಗಿ ಹಾಗೂ ಭತ್ತ ನಮೂದಾಗಿರುವ ಬಗ್ಗೆ ಖಾತರಿಪಡಿಸಿಕೊಳ್ಳುವಂತೆ ತಿಳಿಸಿದರು.
ರೈತರಿಂದ ರಾಗಿ ಹಾಗೂ ಭತ್ತ ಖರೀದಿಸುವ ಸಂದರ್ಭದಲ್ಲಿ ರೈತರಿಗೆ ಯಾವುದೇ ತೊಂದರೆಯಾಗದAತೆ ಕ್ರಮವಹಿಸಬೇಕು. ರೈತರು ರಾಗಿ ಹಾಗೂ ಭತ್ತ ಮಾರಾಟ ಮಾಡಲು ಯಾವುದೇ ಮಧ್ಯವರ್ತಿಗಳ ಸಹಾಯ ಪಡೆಯದೇ ರೈತ ಸಂಪರ್ಕ ಕೇಂದ್ರದಲ್ಲೇ ನೋಂದಣಿ ಮಾಡಿಕೊಂಡು, ರಾಗಿ ಹಾಗೂ ಭತ್ತ ಮಾರಾಟ ಮಾಡುವಂತೆ ತಿಳಿಸಿದರು.
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರಾದ ರಮ್ಯ, ಕೆ.ಎಫ್.ಸಿಎಸ್.ಸಿ ಜಿಲ್ಲಾ ವ್ಯವಸ್ಥಾಪಕರು, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.