ರಾಮನಗರ, ನ. 04 : ಕೇಂದ್ರ ಸರ್ಕಾರದ ಪ್ರವಾಸೋದ್ಯಮ ಸಚಿವಾಲಯ, ಕೇಂದ್ರ ಸಂಸ್ಕೃತಿ ಸಚಿವಾಲಯ, ಪ್ರವಾಸೋದ್ಯಮ ಇಲಾಖೆ ಮತ್ತು ಸಂಗೀತ ನಾಟಕ ಅಕಾಡೆಮಿಯ ಸಹಯೋಗದೊಂದಿಗೆ ರಾಜ್ಯದ ಸಂಗೀತ ಮತ್ತು ಸಾಂಸ್ಕೃತಿಕ ಪರಂಪರೆಯ ಆಚರಣೆಯಾದ ಮೈಸೂರು ಸಂಗೀತ ಸುಗಂಧ ಉತ್ಸವವನ್ನು-2024ರ ಕಾರ್ಯಕ್ರಮವನ್ನು ನ.8 ರಿಂದ 10 ರವರೆಗೆ ಮೈಸೂರಿನಲ್ಲಿ ಆಯೋಜಿಸಲಾಗುತ್ತಿದೆ.
ಈ ಕಾರ್ಯಕ್ರಮದ ಅಂಗವಾಗಿ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಶ್ರೀ ಅಪ್ರಮೇಯ ಸ್ವಾಮಿ ದೇವಾಲಯದಲ್ಲಿ ಇತ್ತೀಚೆಗೆ ಖ್ಯಾತ ಗಾಯಕ ಟಿ.ವಿ. ರಾಮಪ್ರಸಾದ್ ಮತ್ತು ತಂಡದವರಿAದ ಸುಗಂಧ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ರವಿ ಕುಮಾರ್ ಎಚ್.ಡಿ., ಭಾರತೀಯ ಪ್ರವಾಸೋದ್ಯಮ ಮಂತ್ರಾಲಯ ಅಧಿಕಾರಿ ಚಂದ್ರನಾಯ್ಕ, ಕೇಂದ್ರ ಸಂಸ್ಕೃತಿ ಸಚಿವಾಲಯದ ಅಧಿಕಾರಿ ವಿಜಯ್ ಸಿಂಗ್ ಹಾಗೂ ಇತರೆ ಗಣ್ಯರು ಉಪಸ್ಥಿತರಿದ್ದರು.