ದಿನಾಂಕ:05.01.2025 ರಂದು ಮಧ್ಯಾಹ್ನ, ಎಂ.ಕೆ ದೊಡ್ಡಿ ಪೊಲೀಸ್ ಠಾಣಾ ವ್ಯಾಪ್ತಿಯ ಗೌಡಗೆರೆ ಗ್ರಾಮದ ಮನೆಯೊಂದರಲ್ಲಿ ಬೀಗ ಮುರಿದು, ಮನೆಯಲ್ಲಿದ್ದ ಚಿನ್ನದ ಒಡವೆಗಳು ಹಾಗೂ 10,000/- ರೂ ನಗದು ಹಣವನ್ನು ಕಳ್ಳತನ ಮಾಡಿರುವ ಬಗ್ಗೆ ಪಿರ್ಯಾದುದಾರರು ನೀಡಿದ ದೂರಿನ ಮೇರೆಗೆ ಎಂ.ಕೆ ದೊಡ್ಡಿ ಪೊಲೀಸ್ ಠಾಣೆ ಮೊ.ಸಂ: 02/2025, ಕಲಂ 331 (3), 305 ಬಿ.ಎನ್.ಎಸ್ ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತದೆ.
ಸದರಿ ಪ್ರಕರಣದಲ್ಲಿ ತನಿಖೆ ನಡೆಸಿ, ಆರೋಪಿಯ ಬಗ್ಗೆ ಮಾಹಿತಿ ಕಲೆ ಹಾಕಿ, ದಿನಾಂಕ: 11.01.2025 ರಂದು ಆರೋಪಿಯನ್ನು ಬಂಧಿಸಿ, ಆತನನ್ನು ವಿಚಾರಣೆ ಮಾಡಿ, ಕಳ್ಳತನ ಮಾಡಿದ್ದ 60 ಗ್ರಾಂ ಚಿನ್ನಾಭರಣಗಳನ್ನು ಅಮಾನತ್ತು ಪಡಿಸಿಕೊಂಡು, ಒಟ್ಟು 3 ಪ್ರಕರಣಗಳನ್ನು ಪತ್ತೆ ಮಾಡುವಲ್ಲಿ ಎಂ.ಕೆ ದೊಡ್ಡಿ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಯಶ್ವಸಿಯಾಗಿರುತ್ತಾರೆ.
ಪತ್ತೆಯಾದ ಪ್ರಕರಣಗಳು:
1. ಎಂ.ಕೆ ದೊಡ್ಡಿ ಪೊಲೀಸ್ ಠಾಣೆ ಮೊ.ಸಂ: 02/2025, ಕಲಂ 331 (3), 305 ಬಿ.ಎನ್.ಎಸ್.
2. ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆ ಮೊ.ಸಂ : 215/2024 ಕಲಂ 305, 331(3) ಬಿ.ಎನ್.ಎಸ್.
3. ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆ ಮೊ.ಸಂ : 119/2024 ಕಲಂ 457, 380 ಐ.ಪಿ.ಸಿ.
ದಿನಾಂಕ:10.01.2025 ರಂದು ಮಧ್ಯಾಹ್ನ, ಎಂ.ಕೆ ದೊಡ್ಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮಾಕಳಿ ಗ್ರಾಮದ ಮನೆಯೊಂದರಲ್ಲಿ ಬೀಗ ಮುರಿದು, ಮನೆಯಲ್ಲಿದ್ದ ಚಿನ್ನದ ಒಡವೆಗಳು ಹಾಗೂ 63,000/- ರೂ ನಗದು ಹಣವನ್ನು ಕಳ್ಳತನ ಮಾಡಿರುವ ಬಗ್ಗೆ ಪಿರ್ಯಾದುದಾರರು ನೀಡಿದ ದೂರಿನ ಮೇರೆಗೆ, ಎಂ.ಕೆ ದೊಡ್ಡಿ ಪೊಲೀಸ್ ಠಾಣೆ ಮೊ.ಸಂ: 03/2025, ಕಲಂ 331 (3), 305 ಬಿ.ಎನ್.ಎಸ್ ರೀತ್ಯಾ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿರುತ್ತದೆ.
ಸದರಿ ಪ್ರಕರಣದಲ್ಲಿ ತನಿಖೆ ನಡೆಸಿ, ಆರೋಪಿಯ ಬಗ್ಗೆ ಮಾಹಿತಿ ಕಲೆ ಹಾಕಿ, ಆತನನ್ನು ಬಂಧಿಸಿ, ಕಳ್ಳತನ ಮಾಡಿದ್ದ 14.2 ಗ್ರಾಂ ಚಿನ್ನಾಭರಣ, 25,000/- ರೂ ನಗದು ಹಾಗೂ 1 ದ್ವಿಚಕ್ರ ವಾಹನವನ್ನು ಅಮಾನತ್ತು ಪಡಿಸಿಕೊಂಡು, ಪ್ರಕರಣವನ್ನು ಪತ್ತೆ ಮಾಡುವಲ್ಲಿ ಎಂ.ಕೆ ದೊಡ್ಡಿ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಯಶ್ವಸಿಯಾಗಿರುತ್ತಾರೆ.