ಕರ್ನಾಟಕ ಹಾಲು ಮಹಾಮಂಡಳವು (ಕೆಎಂಎಫ್) ರಾಜ್ಯದ ಕೆಲವು ಪ್ರದೇಶಗಳಲ್ಲಿ ಹಾಲಿನ ಪ್ಯಾಕೆಟ್‌ಗಳಲ್ಲಿ ಇಂಗ್ಲಿಷ್ ಅನ್ನು ಮಾತ್ರ ಬಳಕೆ ಮಾಡುತ್ತಿದ್ದು, ಕನ್ನಡ ಬಳಕೆ ಮಾಡದಿರುವುದಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ (ಕೆಡಿಎ) ತೀವ್ರವಾಗಿ ಕಿಡಿಕಾರಿದೆ.
ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಳವು (ಕೆಎಂಎಫ್) ರಾಜ್ಯದ ಕೆಲವು ಪ್ರದೇಶಗಳಲ್ಲಿ ಹಾಲಿನ ಪ್ಯಾಕೆಟ್‌ಗಳಲ್ಲಿ ಇಂಗ್ಲಿಷ್ ಅನ್ನು ಮಾತ್ರ ಬಳಕೆ ಮಾಡುತ್ತಿದ್ದು, ಕನ್ನಡ ಬಳಕೆ ಮಾಡದಿರುವುದಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ (ಕೆಡಿಎ) ತೀವ್ರವಾಗಿ ಕಿಡಿಕಾರಿದೆ.
ನಿನ್ನೆಯಷ್ಟೇ ನಾಗಾಭರಣ ಅವರು ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳದ ಪ್ರಧಾನ ವ್ಯವಸ್ಥಾಪಕರ ಕಚೇರಿಗೆ ಗುರುವಾರ ಭೇಟಿ ನೀಡಿದ್ದು, ಪರಿಶೀಲನಾ ಸಭೆ ನಡೆಸಿದರು.
ಬಳಿಕ ಮಾತನಾಡಿದ ಅವರು, ಹಾಲಿನ ಪ್ಯಾಕೆಟ್ ಮೇಲೆ ಕನ್ನಡ ಬಳಕೆಯಾಗದಿರುವ ಬಗ್ಗೆ ದೂರುಗಳು ಬಂದಿದ್ದು, ಪ್ಯಾಕೆಟ್‌ನ ಮೇಲ್ಭಾಗದಲ್ಲಿ ಕನ್ನಡಕ್ಕೆ ಆದ್ಯತೆ ನೀಡುವಂತೆ ಕೆಎಂಎಫ್‌ಗೆ ಸೂಚಿಸಲಾಗಿದೆ ಎಂದು ಹೇಳಿದರು.
ಕೆಎಂಎಫ್ ನೇರವಾಗಿ ಹಾಲು ಉತ್ಪಾದಕರಿಂದ ಹಾಲು ಪಡೆಯುತ್ತದೆ. “ಹಾಲು ಮತ್ತು ಇತರ ಡೈರಿ ಉತ್ಪನ್ನಗಳನ್ನು ತಮಿಳುನಾಡು, ಆಂಧ್ರಪ್ರದೇಶ ಮತ್ತು ಇತರ ದಕ್ಷಿಣದ ರಾಜ್ಯಗಳಿಗೆ ಕಳುಹಿಸಲಾಗುತ್ತದೆ. ಕೆಎಂಎಫ್‌ನ ಟೋನ್ಡ್ ಹಾಲಿನ ಪ್ಯಾಕೆಟ್‌ಗಳಲ್ಲಿ ಇಂಗ್ಲಿಷ್ ಭಾಷೆ ಮಾತ್ರ ಮುದ್ರಿಸಲಾಗಿದೆ, ಇದಕ್ಕೆ ಜನರು ಆಕ್ಷೇಪ ವ್ಯಕ್ತಪಡಿಸಿದ್ದು, ಇದು ಕರ್ನಾಟಕದ ಭಾಷಾ ನೀತಿಯ ಉಲ್ಲಂಘನೆಯಾಗಿದೆ. ಡೈರಿ ಪ್ಯಾಕೆಟ್‌ಗಳ ಮೇಲೆ ಕನ್ನಡ ಭಾಷೆಯನ್ನು ಬಳಕೆ ಮಾಡಿದರೆ, ಅದು ಭಾಷೆಯನ್ನು ಜನಪ್ರಿಯಗೊಳಿಸುತ್ತದೆ” ಎಂದು ತಿಳಿಸಿದರು.