ಮುಸ್ಲಿಮರು ಮತ್ತು ಯಾದವರ ಮತಗಳನ್ನು ಪಡೆದುಕೊಂಡು ಹಲವಾರು ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡರೂ ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್ ಮುಖ್ಯಮಂತ್ರಿಯಾಗುವ ತಮ್ಮ ಕನಸನ್ನು ನನಸಾಗಿಸಿಕೊಳ್ಳಲು ಸಾಧ್ಯವಾಗಿಲ್ಲ.
ಲಕ್ನೋ: ಮುಸ್ಲಿಮರು ಮತ್ತು ಯಾದವರ ಮತಗಳನ್ನು ಪಡೆದುಕೊಂಡು ಹಲವಾರು ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡರೂ ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್ ಮುಖ್ಯಮಂತ್ರಿಯಾಗುವ ತಮ್ಮ ಕನಸನ್ನು ನನಸಾಗಿಸಿಕೊಳ್ಳಲು ಸಾಧ್ಯವಾಗಿಲ್ಲ, ಪರಿಸ್ಥಿತಿ ಹೀಗಿರುವಾಗ ಇತರರ ಪ್ರಧಾನಿಯಾಗುವ ಕನಸನ್ನು ಹೇಗೆ ನನಸಾಗಿಸುತ್ತಾರೆ? ಎಂದು ಬಿಎಸ್ ಪಿ ಪಕ್ಷದ ನಾಯಕಿ ಮಾಯಾವತಿ ಪ್ರಶ್ನಿಸಿದ್ದಾರೆ.
2019 ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಮಾಯಾವತಿ ಅವರು ಪ್ರಧಾನಿಯಾಗಬೇಕೆಂಬ ಆಸೆಯಿಂದ ಸಮಾಜವಾದಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿದ್ದರು ಎಂದು ಹೇಳಿದ್ದ ಎಸ್ ಪಿ ಮುಖಂಡ ಅಖಿಲೇಶ್ ಯಾದವ್ ಅವರಿಗೆ ಟಾಂಗ್ ಕೊಟ್ಟಿದ್ದಾರೆ.
ಹಿಂದಿಯಲ್ಲಿ ಸರಣಿ ಟ್ವೀಟ್ ಮಾಡಿರುವ ಮಾಯಾವತಿ ಅವರು, 2019 ರ ಚುನಾವಣೆಯಲ್ಲಿ ಬಿಎಸ್ ಪಿಯೊಂದಿಗೆ ಸಮಾಜವಾದಿ ಪಕ್ಷ ಮೈತ್ರಿ ಮಾಡಿಕೊಂಡರೂ ಉತ್ತರ ಪ್ರದೇಶದಲ್ಲಿ ಕೇವಲ ಐದು ಸ್ಥಾನಗಳನ್ನು ಮಾತ್ರ ಗೆದ್ದುಕೊಂಡಿತ್ತು. ಹೀಗಿರುವಾಗ ಬಿಎಸ್ ಪಿಯ ಮುಖ್ಯಸ್ಥೆ ಪ್ರಧಾನಿಯಾಗಲು ಸಾಧ್ಯ? ಹಾಗಾಗಿ ಇಂತಹ ಬಾಲಿಶ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸಬೇಕು ಎಂದು ಹೇಳಿದ್ದಾರೆ.
ಮಾಯಾವತಿ ಅವರು ಎಂದಿಗೂ ಭಾರತದ ರಾಷ್ಟ್ರಪತಿಯಾಗಲು ಬಯಸಿರಲಿಲ್ಲ ಆದರೆ ದೀನದಲಿತರಿಗೆ ಸಹಾಯ ಮಾಡುವ ಉದ್ದೇಶದಿಂದ ಉತ್ತರ ಪ್ರದೇಶದ ಮುಖ್ಯಮಂತ್ರಿ ಅಥವಾ ಪ್ರಧಾನಿಯಾಗಬೇಕೆಂದು ಬಯಸಿದ್ದೆ ಎಂದು ಹೇಳಿದ್ದರು. ಇತ್ತೀಚಿನ ಉತ್ತರ ಪ್ರದೇಶ ಚುನಾವಣೆಯಲ್ಲಿ ಬಿಎಸ್ ಪಿ ತನ್ನ ಮತಗಳನ್ನು ಆಡಳಿತಾರೂಢ ಬಿಜೆಪಿಗೆ ವರ್ಗಾಯಿಸಿದೆ ಎಂದು ಅಖಿಲೇಶ್ ಯಾದವ್ ಟೀಕಿಸಿದರು.