ವಿಶ್ವ ಮಟ್ಟದಲ್ಲಿ ಕೆಜಿಎಫ್ ಚಾಪ್ಟರ್ 2 ಯಶಸ್ಸಿಗೆ ಕಿರಣ್ ಮಜುಂದಾರ್ ಶಾ ಫಿದಾ!

ಭಾರತೀಯ ಚಿತ್ರರಂಗದಲ್ಲಿ ದಾಖಲೆ ಮೇಲೆ ದಾಖಲೆ ಬರೆಯುತ್ತಾ ಸಾಗಿರುವ ಕನ್ನಡದ ಕೆಜಿಎಫ್ ಚಾಪ್ಟರ್ 2 ಚಿತ್ರ ವಿಶ್ವದಾದ್ಯಂತ ಬಾಕ್ಸ್ ಆಫೀಸ್ ಕಲೆಕ್ಷನ್ ನಲ್ಲಿ 1 ಸಾವಿರ ಕೋಟಿ ದೋಚಿದೆ. ಈ ಸಾಧನೆ ಮಾಡಿದ ಭಾರತದ ನಾಲ್ಕನೇ ಚಿತ್ರ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ.

ಬೆಂಗಳೂರು: ಭಾರತೀಯ ಚಿತ್ರರಂಗದಲ್ಲಿ ದಾಖಲೆ ಮೇಲೆ ದಾಖಲೆ ಬರೆಯುತ್ತಾ ಸಾಗಿರುವ ಕನ್ನಡದ ಕೆಜಿಎಫ್ ಚಾಪ್ಟರ್ 2 ಚಿತ್ರ ವಿಶ್ವದಾದ್ಯಂತ ಬಾಕ್ಸ್ ಆಫೀಸ್ ಕಲೆಕ್ಷನ್ ನಲ್ಲಿ 1 ಸಾವಿರ ಕೋಟಿ ದೋಚಿದೆ. ಈ ಸಾಧನೆ ಮಾಡಿದ ಭಾರತದ ನಾಲ್ಕನೇ ಚಿತ್ರ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ.

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಾಪ್ಟರ್-2 ಸಿನಿಮಾ, ದೇಶ ಮಾತ್ರವಲ್ಲದೇ ಹೊರದೇಶಗಳಲ್ಲಿಯೂ ಸಾಕಷ್ಟು ಸೌಂಡ್ ಮಾಡುತ್ತಿದ್ದು, ಅಂತಾರಾಷ್ಟ್ರೀಯ ಖ್ಯಾತನಾಮರು ಕೂಡಾ ಚಿತ್ರದ ಯಶಸ್ಸಿನ ಬಗ್ಗೆ ಆಕರ್ಷಿತರಾಗಿದ್ದಾರೆ.

 

ಚಿತ್ರ ನಿರ್ಮಾಣದಲ್ಲಿ ಕರುನಾಡಿನ ಪ್ರತಿಭೆಯನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸಿದ ಕೆಜಿಎಫ್- ಚಾಪ್ಟರ್ 2 ಸಿನಿಮಾಕ್ಕೆ ಬಯೋಕಾನ್ ಅಧ್ಯಕ್ಷೆ ಕಿರಣ್ ಮಜುಂದಾರ್ ಶಾ ಕೂಡಾ ಫಿದಾ ಆಗಿದ್ದಾರೆ.

ಈ ಕುರಿತು ಟ್ವೀಟರ್  ಮಾಡಿರುವ ಕಿರಣ್ ಮಜುಂದಾರ್ ಶಾ, ಸಿನಿಮಾದ ವಿಮರ್ಶೆಗಳನ್ನು ಓದಿದ  ನಂತರ ಕನ್ನಡ ಸಿನಿಮಾವನ್ನು ಅಂತಾರಾಷ್ಟ್ರೀಯ ಕಕ್ಷೆಯಲ್ಲಿ ಪರಿಚಯಿಸಿದ ವ್ಯಕ್ತಿಯನ್ನು ಭೇಟಿ ಮಾಡಿದೆ. ಬೆಂಗಳೂರು ನಿಜವಾಗಿಯೂ ಸೃಜನಾತ್ಮಕ ಜಾನಪದದ, ಸೃಜನಾತ್ಮಕ ನಗರವಾಗಿದೆ. ಕೆಜಿಎಫ್ ಚಾಪ್ಟರ್ 2 ಸಿನಿಮಾ ವೀಕ್ಷಿಸಲು ಎದುರು ನೋಡುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.

Share & Spread
error: Content is protected !!