ರಾಜ್ಯದಲ್ಲಿ ದಾಖಲೆ ಸಂಖ್ಯೆಯಲ್ಲಿ ಟ್ರಾನ್ಸ್ ಫಾರ್ಮರ್ ರಿಪೇರಿ: ಸಚಿವ ವಿ. ಸುನೀಲ್ ಕುಮಾರ್

ಟ್ರಾನ್ಸ್ ಫಾರ್ಮರ್ ನಿರ್ವಹಣಾ ಅಭಿಯಾನದಲ್ಲಿ ಮೊದಲ ದಿನ ಅಪಾಯಕಾರಿ ಸ್ಥಿತಿಯಲ್ಲಿದ್ದ ಒಟ್ಟು 16, 114 ಟ್ರಾನ್ಸ್ ಫಾರ್ಮರ್ ಗಳನ್ನು ದುರಸ್ತಿ ಮಾಡಲಾಗಿದೆ. ಈ ಮೂಲಕ ಇಂಧನ ಇಲಾಖೆ ಮತ್ತಷ್ಟು ಜನಸ್ನೇಹಿಯಾಗುತ್ತಿದೆ ಎಂದು ಇಂಧನ ಸಚಿವ ವಿ. ಸುನೀಲ್ ಕುಮಾರ್ ಹೇಳಿದ್ದಾರೆ.

ಬೆಂಗಳೂರು: ಟ್ರಾನ್ಸ್ ಫಾರ್ಮರ್ ನಿರ್ವಹಣಾ ಅಭಿಯಾನದಲ್ಲಿ ಮೊದಲ ದಿನ ಅಪಾಯಕಾರಿ ಸ್ಥಿತಿಯಲ್ಲಿದ್ದ ಒಟ್ಟು 16, 114 ಟ್ರಾನ್ಸ್ ಫಾರ್ಮರ್ ಗಳನ್ನು ದುರಸ್ತಿ ಮಾಡಲಾಗಿದೆ. ಈ ಮೂಲಕ ಇಂಧನ ಇಲಾಖೆ ಮತ್ತಷ್ಟು ಜನಸ್ನೇಹಿಯಾಗುತ್ತಿದೆ ಎಂದು ಇಂಧನ ಸಚಿವ ವಿ. ಸುನೀಲ್ ಕುಮಾರ್ ಹೇಳಿದ್ದಾರೆ.

ಈ ಸಂಬಂಧ ಅವರಿಂದು ಟ್ವೀಟ್ ಮಾಡಿದ್ದು, ಮೆಸ್ಕಾಂ ವಲಯದ 1,353, ಬೆಸ್ಕಾಂ ವಲಯದ 534, ಸೆಸ್ಕಾಂ 1,535, ಜೆಸ್ಕಾಂ ವಲಯದ 12,206 ಟ್ರಾನ್ಸ್ ಫಾರ್ಮರ್ ರಿಪೇರಿ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ

ಇಂಧನ ಇಲಾಖೆಯನ್ನು ಮತ್ತಷ್ಟು ಜನಸ್ನೇಹಿಯಾಗಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಈ ಅಭಿಯಾನ ಕೈಗೊಂಡಿದೆ. ಮೇ 05 ರಿಂದ 15ರವರೆಗೆ ಟ್ರಾನ್ಸ್ ಫಾರ್ಮರ್ ನಿರ್ವಹಣಾ ಅಭಿಯಾನ ನಡೆಯಲಿದೆ. ಅಪಾಯಕಾರಿ ಪರಿವರ್ತಕ ಕೇಂದ್ರಗಳನ್ನು ಗುರುತಿಸಿ ಸ್ಥಳದಲ್ಲಿಯೇ ಬದಲಾವಣೆ ಮಾಡುವ ಮೂಲಕ ಸಂಭವನೀಯ ಅಪಾಯವನ್ನು ದೂರ ಮಾಡುವ ವಿನೂತನ ಪ್ರಯತ್ನ ಇದಾಗಿದೆ ಎಂದು ಇಲಾಖೆ ತಿಳಿಸಿದೆ.

Share & Spread
error: Content is protected !!