ಜಿಕೆವಿಕೆಯಲ್ಲಿ ಕೃಷಿ ಇಲಾಖೆ ಆಯೋಜಿಸಿದ್ದ ಸಮಾರಂಭದಲ್ಲಿ ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ-ಕೃಷಿ ಸಂಜೀವಿನಿಯ 100 ವಾಹನಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಚಾಲನೆ ನೀಡಿದರು.
ಬೆಂಗಳೂರು: ಜಿಕೆವಿಕೆಯಲ್ಲಿ ಕೃಷಿ ಇಲಾಖೆ ಆಯೋಜಿಸಿದ್ದ ಸಮಾರಂಭದಲ್ಲಿ ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ-ಕೃಷಿ ಸಂಜೀವಿನಿಯ 100 ವಾಹನಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಚಾಲನೆ ನೀಡಿದರು. ಕೃಷಿ ಸಚಿವ ಬಿ.ಸಿ. ಪಾಟೀಲ್, ತೋಟಗಾರಿಕೆ ಸಚಿವ ಮುನಿರತ್ನ ಮತ್ತಿರರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಪ್ರಾಯೋಗಿಕವಾಗಿ 40 ಕೃಷಿ ಸಂಜೀವಿನಿ ವಾಹನಗಳಿಗೆ ಚಾಲನೆ ನೀಡಲಾಗಿತ್ತು. ಇದೀಗ ರೈತರಿಗೆ ಮತ್ತಷ್ಟು ಸಹಕಾರಿಯಾಗಲು ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲೂಕು ರೈತ ಸಂಪರ್ಕ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸಲು 100 ವಾಹನಗಳನ್ನು ಸಿಎಂ ಬಸವರಾಜ ಬೊಮ್ಮಾಯಿ ಲೋಕಾರ್ಪಣೆ ಮಾಡಿದರು.
ಮುಖ್ಯಮಂತ್ರಿ @BSBommai ಅವರು ಇಂದು ಬೆಂಗಳೂರಿನ ಜಿಕೆವಿಕೆಯಲ್ಲಿ ಕೃಷಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಸಮಾರಂಭದಲ್ಲಿ "ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ" (ಕೃಷಿ ಸಂಜೀವಿನಿ) 100 ವಾಹನಗಳನ್ನು ಲೋಕಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಕೃಷಿ ಸಚಿವ @bcpatilkourava ತೋಟಗಾರಿಕೆ ಸಚಿವ @MunirathnaMLA ಹಾಗೂ ಇತರರು ಉಪಸ್ಥಿತರಿದ್ದರು. pic.twitter.com/AuyDvDEOcM— CM of Karnataka (@CMofKarnataka) May 8, 2022
ರೈತರು ಕೃಷಿ ಸಂಜೀವಿನಿ ಸಹಾಯವಾಣಿ ಸಂಖ್ಯೆ 155313 ಕರೆ ಮಾಡಿದರೆ, ನೇರವಾಗಿ ರೈತರ ಜಮೀನುಗಳಿಗೆ ಬಂದು ಪರೀಕ್ಷೆ ಮಾಡುತ್ತದೆ. ಜಮೀನುಗಳಲ್ಲಿ ಉತ್ಪಾದನೆ ಮತ್ತು ಉತ್ಪಾದಕತೆ ಸವೆತ, ಅತಿಯಾದ ಬೆಳೆ ಬೆಳವಣಿಗೆ, ಕೀಟ ಮತ್ತು ರೋಗದಂತಹ ನೈಸರ್ಗಿಕ ವಿಪತ್ತುಗಳಿಗೆ ಪರಿಹಾರ ಒದಗಿಸುತ್ತದೆ.