ರಾಜ್ಯದಲ್ಲಿ ಕೈಗಾರಿಕೆಗಳನ್ನು ಸ್ಥಾಪನೆ ಮಾಡಲು ಮುಂದೆ ಬರುವ ಉದ್ಯಮಿಗಳಿಗೆ ತಕ್ಷಣವೇ ಭೂ ಮಂಜೂರು ಮಾಡಲು ಅನುಕೂಲವಾಗುವಂತೆ ರಾಜ್ಯಾದ್ಯಂತ 50 ಸಾವಿರ ಎಕರೆ ಜಮೀನನ್ನು ಭೂ ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಮುರುಗೇಶ್ ನಿರಾಣಿ ಅವರು ಶನಿವಾರ ಹೇಳಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಕೈಗಾರಿಕೆಗಳನ್ನು ಸ್ಥಾಪನೆ ಮಾಡಲು ಮುಂದೆ ಬರುವ ಉದ್ಯಮಿಗಳಿಗೆ ತಕ್ಷಣವೇ ಭೂ ಮಂಜೂರು ಮಾಡಲು ಅನುಕೂಲವಾಗುವಂತೆ ರಾಜ್ಯಾದ್ಯಂತ 50 ಸಾವಿರ ಎಕರೆ ಜಮೀನನ್ನು ಭೂ ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ಶನಿವಾರ ಹೇಳಿದ್ದಾರೆ.
ಶನಿವಾರ ನಗರದ ಖಾಸಗಿ ಹೋಟೆಲ್ನಲ್ಲಿ ನಡೆದ ಭಾರತೀಯ ಉತ್ಪಾದನಾ ಪ್ರದರ್ಶನದ ಕರ್ಟನ್ ರೈಸರ್ ಉದ್ಘಾಟಿಸಿ ಸಚಿವರು ಮಾತನಾಡಿದರು.
2022ರ ನವೆಂಬರ್ನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೂ ಮುನ್ನ ಸರ್ಕಾರ 50,000 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ಕೈಗಾರಿಕೋದ್ಯಮಿಗಳಿಗೆ ಭೂಮಿ ಮಂಜೂರು ಮಾಡಿ ವಿಶ್ವದರ್ಜೆಯ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಹೇಳಿದರು.
ಹೆಚ್ಚಿನ ಕೈಗಾರಿಕೆಗಳನ್ನು ಸ್ಥಾಪಿಸುವುದರಿಂದ ಸ್ಥಳೀಯರಿಗೆ ಹೆಚ್ಚಿನ ಉದ್ಯೋಗಗಳು ಸೃಷ್ಟಿಯಾಗುತ್ತವೆ ಮತ್ತು ನಿರುದ್ಯೋಗ ಕಡಿಮೆಯಾಗುತ್ತದೆ. ಕೇಂದ್ರ ಸರ್ಕಾರದ ಬಹು ನಿರೀಕ್ಷಿತ ಆತ್ಮ ನಿರ್ಭರ ಭಾರತ ಯೋಜನೆಗೆ ಅನುಗುಣವಾಗಿ ರಾಜ್ಯದ 2 ಮತ್ತು 3ನೇ ಹಂತದ ನಗರಗಳಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಉತ್ತೇಜಿಸುವುದರ ಜೊತೆಗೆ ಶೀಘ್ರದಲ್ಲೇ ರಾಜ್ಯ ಸರ್ಕಾರವು ಒಂದು ಜಿಲ್ಲೆ ಒಂದು ಉತ್ಪನ್ನ ನೀತಿಯನ್ನು ಜಾರಿಗೆ ತರಲಿದೆ ಎಂದು ತಿಳಿಸಿದರು.
ಒಂದು ಜಿಲ್ಲೆ ಒಂದು ಉತ್ಪಾದನೆ ನೀತಿಯಿಂದ ಪ್ರತಿ ಜಿಲ್ಲೆಗೆ ಒಂದು ಉತ್ಪನ್ನವನ್ನು ಗುರುತಿಸಲಾಗುತ್ತದೆ. ಈ ಉತ್ಪನ್ನಗಳೊಂದಿಗೆ ತೊಡಗಿಸಿಕೊಂಡಿರುವ ಉದ್ಯಮಿಗಳು ಯೋಜನಾ ವೆಚ್ಚದ 35 ಪ್ರತಿಶತದಷ್ಟು ಕ್ರೆಡಿಟ್ – ಲಿಂಕ್ಡ್ ಕ್ಯಾಪಿಟಲ್ ಸಬ್ಸಿಡಿಯನ್ನು ಪ್ರತಿ ಯೂನಿಟ್ಗೆ ಗರಿಷ್ಠ 10 ಲಕ್ಷ ರೂಪಾಯಿ ಪಡೆಯಬಹುದು.
ರಾಜ್ಯಾದ್ಯಂತ ಸಮತೋಲಿತ ಕೈಗಾರಿಕೀಕರಣವನ್ನು ಉತ್ತೇಜಿಸಿಸಲು ನಾವು ತೆಗೆದುಕೊಂಡಿರುವ ಮತ್ತೊಂದು ಪ್ರಮುಖ ನಿರ್ಧಾರವೆಂದರೆ ಉತ್ಪನ್ನ ನಿರ್ದಿಷ್ಟ ಕೈಗಾರಿಕಾ ಕ್ಲಸ್ಟರ್. ಈ ಯೋಜನೆ ಮೂಲಕ ಹಲವು ಕೈಗಾರಿಕಾ ಸಮೂಹಗಳನ್ನು ಗುರುತಿಸಲಾಗಿದ್ದು, ಪ್ರತಿ ಕ್ಲಸ್ಟರ್ಗೆ ಆಯಾ ಉತ್ಪನ್ನ ವಲಯಕ್ಕೆ ನಿರ್ದಿಷ್ಟವಾದ ವಿಶೇಷ ಪ್ರೊತ್ಸಾಹ ಮತ್ತು ರಿಯಾಯಿತಿಗಳನ್ನು ಘೋಷಿಸಲಾಗಿದೆ ಎಂದು ತಿಳಿಸಿದರು.