ಬೆಂಗಳೂರಿನ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ತಡರಾತ್ರಿ ಕೆಎಸ್ಆರ್’ಟಿಸಿ ಬಸ್ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ 25 ಮಂದಿ ಗಾಯಗೊಂಡು ನಾಲ್ವರ ಸ್ಥಿತಿ ಗಂಭೀರವಾಗಿರುವ ಘಟನೆ ನಡೆದಿದೆ.
ಬೆಂಗಳೂರು: ಬೆಂಗಳೂರಿನ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ತಡರಾತ್ರಿ ಕೆಎಸ್ಆರ್’ಟಿಸಿ ಬಸ್ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ 25 ಮಂದಿ ಗಾಯಗೊಂಡು ನಾಲ್ವರ ಸ್ಥಿತಿ ಗಂಭೀರವಾಗಿರುವ ಘಟನೆ ನಡೆದಿದೆ.
ಮಡಿಕೇರಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಲ್ಲಿ 45 ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಈ ಬಸ್ ಅಪಘಾತದಲ್ಲಿ ಯಾವುದೇ ಸಾವು ಸಂಭವಿಸಿಲ್ಲ ಎಂದು ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಡಾ. ಸಂಜೀವ್ ಪಾಟೀಲ್ ಅವರು ಮಾಹಿತಿ ನೀಡಿದ್ದಾರೆ.
ತಡರಾತ್ರಿ 1.30ರ ಸುಮಾರಿಗೆ ಕೆಂಗೇರಿಯ ಭಾರತ್ ಪೆಟ್ರೋಲಿಯಂ ಬಳಿ ಅಪಘಾತ ನಡೆದಿದೆ. ಮಡಿಕೇರಿಯಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ, ಮೆಟ್ರೋ ಪಿಲ್ಲರ್ ಗೆ ಡಿಕ್ಕಿ ಹೊಡೆದಿದೆ. ಕೆಂಗೇರಿಯ ಭಾರತ್ ಪೆಟ್ರೋಲಿಯಂ ಬಳಿ ಅಪಘಾತ ನಡೆದಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.