ಭ್ರಷ್ಟಾಚಾರ ಮತ್ತು ವಿಳಂಬ ಧೋರಣೆ ಸರ್ಕಾರದ ವರ್ಚಸ್ಸಿಗೆ ಧಕ್ಕೆಯುಂಟು ಮಾಡಲಿದ್ದು, ಯಾವುದೇ ಸಂದರ್ಭದಲ್ಲಿಯೂ ಈ ಎರಡನ್ನೂ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಜಿಲ್ಲಾಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು: ಭ್ರಷ್ಟಾಚಾರ ಮತ್ತು ವಿಳಂಬ ಧೋರಣೆ ಸರ್ಕಾರದ ವರ್ಚಸ್ಸಿಗೆ ಧಕ್ಕೆಯುಂಟು ಮಾಡಲಿದ್ದು, ಯಾವುದೇ ಸಂದರ್ಭದಲ್ಲಿಯೂ ಈ ಎರಡನ್ನೂ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಜಿಲ್ಲಾಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭಾನುವಾರ ರಜೆ ಇದ್ದರೂ ಸಭೆ ನಡೆಸಿದರು.
ಸಮಯದ ಪರಿಮಿತಿ ಬಿಟ್ಟು ಕೆಲಸ ಮಾಡಿ. ಯಾವುದೇ ಕಾರಣಕ್ಕೂ ಭ್ರಷ್ಟಾಚಾರ ಸಹಿಸುವುದಿಲ್ಲ. ವಿಳಂಬ ಧೋರಣೆಯನ್ನೂ ಒಪ್ಪುವುದಿಲ್ಲ. ಜನಸಾಮಾನ್ಯರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ. ಬಡವರಿಗೆ ನೆರವಾಗಲು, ಅಭಿವೃದ್ಧಿ ಉದ್ದೇಶದಿಂದ ಯಾವುದೇ ನಿರ್ಧಾರ ತೆಗೆದುಕೊಂಡರೂ ಸರ್ಕಾರ ನಿಮ್ಮ ರಕ್ಷಣೆಗೆ ನಿಲ್ಲುತ್ತದೆ. ಬಜೆಟ್ ಕಾರ್ಯಕ್ರಮ ಅನುಷ್ಠಾನಕ್ಕೆ ಒತ್ತು ನೀಡಿ ಆಡಳಿತದಲ್ಲಿ ಸಂಪೂರ್ಣ ಬದಲಾವಣೆ ತರುವ ಸಂಕಲ್ಪ ಮಾಡಿ ಎಂದು ಸೂಚನೆ ನೀಡಿದರು.
ನ್ನದೇ ಕಲ್ಪನೆಯ ನವ ಕರ್ನಾಟಕದ ಸಾಕಾರಕ್ಕೆ ಡೀಸಿಗಳ ಸಹಕಾರ ಅತ್ಯಗತ್ಯ. ಎಳ್ಲರೂ ಒಂದು ತಂಡವಾಗಿ ಕೆಲಸ ಮಾಡಿ. ಸಾರ್ವಜನಿಕರ ಸಮಸ್ಯೆ ಅಹವಾಲುಗಳನ್ನು ತ್ವರಿತವಾಗಿ ಸ್ಪಂದಿಸಬೇಕು. ರೈತರು ದೀನ ದಲಿತರ ಸಮಸ್ಯೆಗಳಿಗೆ ಕೂಡಲೇ ಪರಿಹಾರ ಸಿಗಬೇಕು. ಇದರಲ್ಲಿ ರಾಜಿ ಆಗುವುದಿಲ್ಲ. ಜಿಲ್ಲಾಧಿಕಾರಿ ಕಚೇರಿಯಲ್ಲೇ ಸಾರ್ವಜನಿಕರ ಅಹವಾಲು ಸ್ವೀಕರಿಸಿ ಪರಿಹರಿಸಲು ಪ್ರತ್ಯೇಕ ಘಟಕ ಆರಂಭಿಸಿ. ಕಷ್ಟದಲ್ಲಿರುವ ಬಡವರಿಗೆ ಸಹಾಯ ಮಾಡಿದರೆ ಹೊಸ ಚೈತನ್ಯ ಮೂಡುತ್ತದೆ. ಅದರಿಂದ ನಿಮಗೂ ತೃಪ್ತಿ. ಜನಸಾಮಾನ್ಯರಿಗೆ ಆಡಳಿತದಲ್ಲಿ ಬದಲಾವಣೆ ಆಗುತ್ತಿದೆ ಎಂಬ ಭಾವನೆ ಮೂಡುತ್ತದೆ. ಈ ನಿಟ್ಟಿನಲ್ಲಿ ಕೈಗೊಳ್ಳುವ ನಿರ್ಧಾರಕ್ಕೆ ಸರ್ಕಾರ ತಮ್ಮ ಪರ ಇರುತ್ತದೆ ಎಂದು ತಿಳಿಸಿದರು.
ಭ್ರಷ್ಟಾಚಾರ ಸ್ವಜನ ಪಕ್ಷಪಾತ ಸಹಿಸುವುದಿಲ್ಲ. ಸಮಯದಲ ಮಿತಿ ಹಾಕಿಕೊಂಡು ಕೆಲಸ ಮಾಡಬೇಡಿ. ಹಾಗೆ ಮಾಡುವವರಿಗೆ ಜಿಲ್ಲಾಧಿಕಾರಿ ಹುದ್ದೆ ಬೇಕಿಲ್ಲ ಎಂದು ಹೇಳುವ ಮೂಲಕ ಸಮಯ ಮಿತಿ ಬಿಟ್ಟು ಕೆಲಸ ಮಾಡದಿದ್ದರೆ ಜಿಲ್ಲಾಧಿಕಾರಿ ಹುಡ್ಡೆಯಿಂದ ಹೊರ ನಡೆಯಬೇಕಾಗುತ್ತದೆ ಎಂದು ಸೂಕ್ಷ್ಮವಾಗಿ ಎಚ್ಚರಿಸಿದ್ದು, ಕಂಡು ಬಂದಿತು.