ಹೆಬ್ಬಾಳ ಬಸ್ ನಿಲ್ದಾಣದಲ್ಲಿ ವಿದ್ಯುತ್ ಶಾಕ್’ಗೆ ವ್ಯಕ್ತಿ ಬಲಿ: ಜಾಹೀರಾತು ಸಂಸ್ಥೆ ನಿರ್ಲಕ್ಷ್ಯ ಕಾರಣ ಎಂದ ಬೆಸ್ಕಾಂ!

ಬೆಂಗಳೂರು: ಹೆಬ್ಬಾಳ ಬಸ್ ನಿಲ್ದಾಣದಲ್ಲಿ ವಿದ್ಯುತ್ ಪ್ರವಹಿಸಿ 35 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಸಂಬಂಧ ಖಾಸಗಿ ಜಾಹೀರಾತು ಸಂಸ್ಥೆ ವಿರುದ್ದ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ಆರೋಪಿಸಿದೆ.

ಹೆಬ್ಬಾಳದ ಬೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್ ಹೆಚ್.ಡಿ.ಚೆನ್ನಕೇಶವ ಮಾತನಾಡಿ, ಟೈಮ್ಸ್ ಇನೋವೇಟಿವ್ ಮೀಡಿಯಾ ಹೆಸರಿನ ಖಾಸಗಿ ಜಾಹೀರಾತು ಕಂಪನಿಯೊಂದು ಅಕ್ರಮವಾಗಿ ಬಸ್ಸು ನಿಲ್ದಾಣದ ಸಮೀಪದ ವಿದ್ಯುತ್ ಕಂಬದಿಂದ  ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದು ಬಸ್ ನಿಲ್ದಾಣದ ಸುತ್ತಲೂ ಜಾಹೀರಾತು ಫಲಕದ ಮೆಟಲ್ ವೈರ್ ಸಂಪರ್ಕಕ್ಕೆ ಬಂದು ವ್ಯಕ್ತಿ ಮೃತಪಟ್ಟಿದ್ದಾರೆಂದು ಹೇಳಿದ್ದಾರೆ.

ಜಾಹೀರಾತು ಫಲಕಕ್ಕೆ ನೀಡಿದ್ದ ವಿದ್ಯುತ್ ಸಂಪರ್ಕವನ್ನು 2020ರ ಡಿಸೆಂಬರ್ ನಲ್ಲೇ ಸ್ಥಗಿತಗೊಳಿಸಲಾಗಿತ್ತು. ಆದರೆ, ಇತ್ತೀಚೆಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದು ಜಾಹೀರಾತು ಫಲಕ ಅಳವಡಿಸಿರುವುದು ಸ್ಥಳ ಪರಿಶೀಲನೆಯಿಂದ ತಿಳಿದುಬಂದಿದೆ ಹೀಗಾಗಿ ವಿದ್ಯುಕತ್ ಅವಘಡ ಬೆಸ್ಕಾಂ ನಿರ್ಲಕ್ಷ್ಯದಿಂದ ಆಗಿಲ್ಲ. ಅಕ್ರಮ ವಿದ್ಯುತ್ ಸಂಪರ್ಕ ಪಡೆದಿರುವ ಖಾಸಗಿ ಜಾಹೀರಾತು ಸಂಸ್ಥೆ ವಿರುದ್ಧ ದೂರು ನೀಡಲಾಗುವುದು ಎಂದು ತಿಳಿಸಿದರು.

Share & Spread
error: Content is protected !!