ಹಾಸನ: ಅಂಗನವಾಡಿ ಕೇಂದ್ರದಲ್ಲಿ ಹಾವು ಕಡಿತ, ಸಮಯಕ್ಕೆ ಸರಿಯಾಗಿ ಆಂಬ್ಯುಲೆನ್ಸ್‌ ಸಿಗದೆ ಬಾಲಕ ಸಾವು

ಹಾಸನ : ಅಂಗನವಾಡಿ ಕೇಂದ್ರದ ಆವರಣದಲ್ಲಿ ಹಾವು ಕಚ್ಚಿ ಬಾಲಕನೊಬ್ಬ  ಸಾವನ್ನಪ್ಪಿದ ಘಟನೆ ಹಾಸನ  ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡಕಲ್ಲೂರು ಗ್ರಾಮದಲ್ಲಿ ನಡೆದಿದೆ.

ಮೃತ ಬಾಲಕನನ್ನು ರೋಷನ್ (4) ಎಂದು ಗುರುತಿಸಲಾಗಿದೆ. ಅಂಗನವಾಡಿ ಸಹಾಯಕಿ ಮಕ್ಕಳನ್ನು ಕರೆ ತರಲು ಮನೆಗಳಿಗೆ ಹೋದಾಗ ಈ ಘಟನೆ ನಡೆದಿದೆ. ದೊಡ್ಡಕಲ್ಲೂರು ಗ್ರಾಮದ ಯಶವಂತ್-ಗೌರಿ ಎಂಬುವವರ ಪುತ್ರ ರೋಷನ್‍ಗೆ ಹಾವು ಕಚ್ಚಿತ್ತು.

ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ರೋಷನ್‍ನನ್ನು ಹೆತ್ತೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬೈಕ್‍ನಲ್ಲಿ ಕರೆ ತಂದಿದ್ದಾರೆ. ಆದರೆ ಅಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಸಕಲೇಶಪುರ ಪಟ್ಟಣ್ಣದ ಆಸ್ಪತ್ರೆಗೆ ತೆರಳುವಂತೆ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅಂಬುಲೆನ್ಸ್‌ಗೆ ಕರೆ ಮಾಡಿದ್ದಾರೆ.

ಹಾವು ಕಚ್ಚಿದ ತಕ್ಷಣ ಸಮಯಕ್ಕೆ ಸರಿಯಾಗಿ ಆಂಬ್ಯುಲೆನ್ಸ್ ಸಿಗದೆ ಹೋದುದರಿಂದ, ಹೆತ್ತೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮಗುವನ್ನು ತಂದೆ ಬೈಕ್‌ನಲ್ಲೇ ಕರೆತಂದಿದ್ದಾರೆ. ಹೆತ್ತೂರಿನಿಂದಲೂ ಸಕಲೇಶಪುರಕ್ಕೆ ಆಂಬ್ಯುಲೆನ್ಸ್ ಸಿಕ್ಕಿಲ್ಲ. ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಸಿಗದೇ ಬಾಲಕ ಸಾವನ್ನಪ್ಪಿದ್ದಾನೆಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share & Spread
error: Content is protected !!