ಕೋಡಂಬಳ್ಳಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಪ್ರಮುಖ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರ ಸಭೆ ಹಾಗೂ ಪಕ್ಷ ಸೇರ್ಪಡೆ ಕಾರ್ಯಕ್ರಮ

ಇಂದು ಕೋಡಂಬಳ್ಳಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಪ್ರಮುಖ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರ ಸಭೆ ಹಾಗೂ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಚನ್ನಪಟ್ಟಣ ಕಾಂಗ್ರೆಸ್ ಅಭ್ಯರ್ಥಿಯಾದ ಎಸ್.ಗಂಗಾಧರ್ ರವರು ಮಾತನಾಡಿ ಕಾಂಗ್ರೆಸ್ ಪಕ್ಷವು ನನನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಿದೆ, ನಾನು ನಿಮ್ಮ ಮನೆ ಮಗನಾಗಿ ಸೇವೆ ಮಾಡಲು ನನಗೆ ಒಂದು ಅವಕಾಶ ನೀಡಿದೆ,ತಾಲೂಕಿನ ಸರ್ವಾಗಿಣಅಭಿವೃದ್ಧಿಗೆ ದುಡಿಯುತ್ತನೆ. ಮತ್ತು ಕಾಂಗ್ರೆಸ್ ಪಕ್ಷವು ಘೋಷಣೆ ಮಾಡಿರುವ ಪ್ರಣಾಳಿಕೆಯನ್ನು ಪ್ರತಿ ಮನೆ ಮನೆಗೆ ತಲುಪಿಸಿ ಕಾಂಗ್ರೆಸ್ ಪಕ್ಷದ ಪರವಾಗಿ ಮತಯಾಚನೆ ಮಾಡಬೇಕೆಂದು ಮುಖಂಡರಿಗೆ ಮತ್ತು ಕಾರ್ಯಕರ್ತರಿಗೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ. ಚನ್ನಪಟ್ಟಣ ಉಸ್ತುವಾರಿಯಾದ ಧುಂತೂರ್ ವಿಶ್ವನಾಥ್ ರವರು ಮಾತನಾಡಿ ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆ ಮಾಡುವ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು ಹಾಗೂ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಬೇಕೆಂದು ಮನವಿ ಮಾಡಿದರು.

ಇದೆ ಸಂದರ್ಭದಲ್ಲಿ ಅಲ್ಲಿನ ಬಿಜೆಪಿ,ಜೆಡಿಎಸ್-ಪಕ್ಷದ ಅನೇಕ ಮುಖಂಡರು ಮತ್ತು ಕಾರ್ಯಕರ್ತರುಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತವನ್ನು ಮೆಚ್ಚಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು.ಈ ವೇದಿಕೆಯಲ್ಲಿ ಚನ್ನಪಟ್ಟಣ ಉಸ್ತುವಾರಿಯಾದ ಧುಂತುರುವಿಶ್ವನಾಥ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರಮೋದ್ ಮತ್ತು ಸುನಿಲ್, ಶಿವಮಾದು ರವರು ಎಲ್ಲ ಮುಂಚುಣಿ ಘಟಕಗಳ ಅಧ್ಯಕ್ಷರುಗಳು ಮತ್ತು ಪದಾಧಿಕಾರಿಗಳುಕಾಂಗ್ರೆಸ್ ಪಕ್ಷದ ಪ್ರಮುಖ ಮುಖಂಡರು ಮತ್ತು ಕಾರ್ಯಕರ್ತರು ಹಾಜರಿದ್ದರು..

Share & Spread
error: Content is protected !!