ರೈತರ ಬೆಳೆಗೆ ಬೆಲೆ ಕುಸಿತ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ರಸ್ತೆಯಲ್ಲಿ ಮೆರವಣಿಗೆ ಸಾಗಿದ ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು..
ರಾಜ್ಯದಲ್ಲಿ ರೈತರು ಬೆಳೆದಂತಹ ರೇಷ್ಮೆ,ತೆಂಗು, ಬಾಳೆ, ಕಬ್ಬು ಮತ್ತು ಕೊಬ್ಬರಿಗೆ ಬೆಲೆಇಲ್ಲದೆ ನಷ್ಟ ಅನುಭವಿಸುತ್ತಿರುವುದು ಒಂದೆಡೆಯಾದರೆ ಮತ್ತೊಂದು ಕಡೆ ಹಾಲಿನ ದರ ಕಡಿತಗೊಂಡು ಸಂಕಷ್ಟಕ್ಕೆ ಸಿಲುಕಿದ್ದು ರೈತರ ನೆರವಿಗೆ ಧಾವಿಸುವಂತೆ ಹಾಗೂ ವೈಜ್ಞಾನಿಕ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ತಾಲೂಕು ರೈತ ಸಂಘದ ವತಿಯಿಂದ ನಗರದ ಗಾಂಧಿ ಭವನದ ಮುಂಭಾಗ ರಸ್ತೆಯಲ್ಲಿ ತೆಂಗಿನಕಾಯಿ ಹೊಡೆಯುವ ಮೂಲಕ ಪ್ರತಿಭಟನೆ ನಡೆಸಿ, ಹೆದ್ದಾರಿಯಲ್ಲಿ ಮೆರವಣಿಗೆ ಸಾಗಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಅಕ್ರೋಷ ವ್ಯಕ್ತಪಡಿಸಿದ ರೈತ ಸಂಘದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು..